ಪರಿಸರ ಸಂರಕ್ಷಣೆಗೆ ನಾವು ಶ್ರಮಿಸೋಣ…

ಪ್ರಕೃತಿ ಮನುಷ್ಯನ ಜೀವನಕ್ಕೆ ಏನ್ನೆಲ್ಲ ಕೊಟ್ಟಿಲ್ಲ. ಅಂತಹದರಲ್ಲಿ ಮನುಷ್ಯ ತನ್ನ ವೈಯಕ್ತಿಕ ಪ್ರಯೋಜನಕ್ಕಾಗಿ ಪರಿಸರದ ಮೇಲೆ ನಿರಂತರ ದಾಳಿ ನಡೆಸಿದ್ದಾನೆ. ಇಂತ ಪರಿಸ್ಥಿತಿ ಹೀಗೆ ಮುಂದುವರೆದರೆ ನಮ್ಮ ಸರ್ವನಾಶ ನಮ್ಮ ಕಣ್ಣೇದುರೆ ನಡೆಯಲಿದೆ. ಇದು ನಡೆಯಬಾರದೆಂದರೆ ಇಂದಿನಿಂದಲೆ ಪರಿಸರದ ಸಂರಕ್ಷಣೆ ಬಗ್ಗೆ ಕಾಳಜಿ ವಹಿಸುವುದು ಮುಖ್ಯ.

ಪರಿಸರದ ಸಂರಕ್ಷಣೆಗಾಗಿ ನಮ್ಮ ಕೆಲಸ ಕಾರ್ಯಗಳನ್ನು ಬದಿಗೊತ್ತುವ ಅವಶ್ಯಕತೆ ಇಲ್ಲ. ನಮ್ಮ ದೈನಂದಿನ ಜೀವನದಲ್ಲಿ ಕೆಲವೊಂದು ಕ್ರಮಗಳನ್ನು ಅನುಸರಿಸಿದರೆ ಅದೇ ಪರಿಸರ ಉಳಿವಿಗೆ ಸಹಾಯಕವಾಗುತ್ತದೆ.

ಪರಿಸರ ರಕ್ಷಣೆಗಾಗಿ ನಾವು ಮಾಡಲೇಬೇಕಾದ ಸಂಗತಿಗಳು

ಪುನರ್ ಬಳಕೆಯಂತ ವಸ್ತುಗಳನ್ನು ಸುಮ್ಮನೆ ಬಿಸಾಡಬೇಡಿ, ಮರುಬಳಕೆ ಮಾಡಿ. ನಿಮಗೆ ಬೇಡದಿದ್ದರೆ ಇತರರಿಗಾದರೂ ದಾನ ಮಾಡಿ. ದಿನದ ಜೀವನದಲ್ಲಿ ಅಥವಾ ಸಮಾರಂಭಗಳ ಸಂದರ್ಭದಲ್ಲಿ ಸುಲಭದಲ್ಲಿ ಮಣ್ಣಾಗಿ ಹೋಗುವ ಪರಿಸರ ಸ್ನೇಹೀ ಉತ್ಪನ್ನಗಳನ್ನು ಬಳಸುವುದು.

ಉದಾ: ಪ್ಲಾಸ್ಟಿಕ್ ಚೀಲದ ಬದಲು ಕಾಗದ ಅಥವಾ ಬಟ್ಟೆಯ ಚೀಲ, ಪ್ಲಾಸ್ಟರ್ ಆಫ್ ಪ್ಯಾರಿಸ್ ಬದಲು ಮಣ್ಣಿನ ಗಣೇಶ, ಪ್ಲಾಸ್ಟಿಕ್ ಗೋಣಿಗಳ ಬದಲು ಸೆಣಬಿನ ನಾರಿನ ಗೋಣಿ. ಎಸೆಯುವ ಸಂಸ್ಕೃತಿ’ಯ ಬದಲು ’ರಿಪೇರಿ ಸಂಸ್ಕೃತಿ’ಯನ್ನು ಅಳವಡಿಸಲು ಸಾಧ್ಯವೋ ಎಂಬುದನ್ನು ನೋಡಿ. ನೆಯಲ್ಲಿಯೇ ಜೈವಿಕ, ಹಸಿ ತ್ಯಾಜ್ಯಗಳ ಸಂಸ್ಕರಣೆ ಮಾಡಿ

ಉದಾ: ಅಡುಗೆಮನೆಯ ಆಹಾರ ತ್ಯಾಜ್ಯ, ಉದ್ಯಾನವನದ ಹಸಿರು ತ್ಯಾಜ್ಯ). ಇದರಿಂದ ನೀವು ಮನೆಯಲ್ಲಿಯೇ ಪರ್ಯಾಯ ಇಂಧನ ಅಥವಾ ಗೊಬ್ಬರ ತಯಾರಿಸಬಹುದು, ಬೀದಿಯಲ್ಲಿರುವ ದನಗಳು, ನಾಯಿಗಳು ಪ್ಲಾಸ್ಟಿಕ್ ತಿನ್ನುವುದನ್ನೂ ತಪ್ಪಿಸಬಹುದು. ಇದನ್ನು ಅಪಾರ್ಟ್‍ಮೆಂಟಿನಲ್ಲಿರುವವರೂ ಮಾಡಬಹುದು.

ಅಪಾಯಕಾರಿ ತ್ಯಾಜ್ಯಗಳನ್ನು ಮಕ್ಕಳ ಕೈಗೆ ಸಿಗದಂತೆ ಸಂಗ್ರಹಿಸಿ ಜಾಗ್ರತೆಯಾಗಿ ವಿಲೇವಾರಿ ಮಾಡಿ. ಉದಾ: ಟ್ಯೂಬ್‍ಲೈಟುಗಳು, ಸಿ.ಎಫ್.ಎಲ್. ಬಲ್ಬುಗಳು, ಇಲೆಕ್ಟ್ರಾನಿಕ್ ಉಪಕರಣಗಳು ಅಥವಾ ಬಿಡಿಭಾಗಗಳು.ವಿಂಗಡನೆ ಮಾಡಿ ವಿಲೇವಾರಿ ಮಾಡುವ ಪ್ರಬುದ್ಧ ವ್ಯವಸ್ಥೆ ಇಲ್ಲದಿದ್ದಲ್ಲಿ ಅದಕ್ಕೋಸ್ಕರ ಒತ್ತಾಯಿಸಿ, ವಿಂಗಡನೆ ಮಾಡುವುದು ನಿಮ್ಮ ಜವಾಬ್ದಾರಿ, ಆದರೆ ಅದರ ಮುಂದಿನ ವ್ಯವಸ್ಥೆಯನ್ನು ಕೇಳುವುದು ನಿಮ್ಮ ಹಕ್ಕು.

Share this Article
Subscribe
Notify of
guest
0 Comments
Inline Feedbacks
View all comments
error:

Join Our

Group