ರೈತರಿಗೆ ಸುವರ್ಣಾವಕಾಶ: “ಕೃಷಿ ಪಂಡಿತ ಪ್ರಶಸ್ತಿ”ಗೆ ಅರ್ಜಿ ಆಹ್ವಾನ:

ರಾಜ್ಯದ ಕೃಷಿ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ ರೈತರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ರೈತರಿಗೆ ಕೃಷಿ ಪಂಡಿತ ಪ್ರಶಸ್ತಿಯನ್ನು ನೀಡುತ್ತಿದ್ದು, ₹1,25,000 ಬಹುಮಾನ ನೀಡಲಾಗುತ್ತಿದೆ. ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನವಾಗಿದೆ.

  • ಕೃಷಿ ಪಂಡಿತ ಪುಶಸ್ತಿ ಮಾನದಂಡಗಳು:

ಕೃಷಿ ಪಂಡಿತ ಪ್ರಶಸ್ತಿಯಲ್ಲಿ ಭಾಗವಹಿಸಲು ಇಚ್ಛಿಸುವವರು ರಾಜ್ಯ ಕೃಷಿ ಕ್ಷೇತ್ರದಲ್ಲಿ ವಿನೂತನ/ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರಬೇಕು.ಕೃಷಿ ವಲಯಕ್ಕೆ ಅನ್ವಯಿಸುವಂತೆ ಗಮನಾರ್ಹ/ಗಣನೀಯವಾದ/ ವಿಭಿನ್ನವಾದ ಮೂಲ ರೂಪದ ಸಾಧನೆ (Innovation) ಮಾಡಿರಬೇಕು.ನಿಗದಿಪಡಿಸಿರುವ ನಮೂನೆಯಲ್ಲಿ ಇಲಾಖೆಯು ಸೂಚಿಸುವ ಅಂತಿಮ ದಿನಾಂಕ ದೊಳಗೆ ಅರ್ಜಿಯನ್ನು ತಾಲ್ಲೂಕು ಮಟ್ಟದ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಸಲ್ಲಿಸುವುದು.

ಈ ಹಿಂದೆ ಕೃಷಿ ಪಂಡಿತ ಪ್ರಶಸ್ತಿ (ಪ್ರಥಮ, ದ್ವಿತೀಯ, ತೃತೀಯ ಹಾಗೂ ಉದಯೋನ್ಮುಖ) ಪಡೆದವರು ಮತ್ತೆ ಸ್ಪರ್ಧಿಸುವಂತಿಲ್ಲ.ಕೇಂದ್ರ ಅಥವಾ ರಾಜ್ಯ ಸರ್ಕಾರಿ ಸೇವೆಯಲ್ಲಿರುವ ಯಾವುದೇ ಇಲಾಖೆ/ ವಿಶ್ವವಿದ್ಯಾಲಯ/ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ನೌಕರರು ಮತ್ತು ಅವರ ಕುಟುಂಬದ ಸದಸ್ಯರು ಸ್ಪರ್ಧೆ ಭಾಗವಹಿಸುವಂತಿಲ್ಲ.

  • ಬೆಳೆ ಸ್ಪರ್ಧೆಗೆ ಸ್ಪರ್ಧಿಸಲು ಅರ್ಹತೆ:

ಅರ್ಜಿದಾರರು ಸ್ವತಃ ಬೇಸಾಯದಲ್ಲಿ ತೊಡಗಿರುವ ಕ್ರಿಯಾಶೀಲ ಕೃಷಿಕನಾಗಿರಬೇಕು.ಸ್ವಂತ ಜಮೀನು ಹೊಂದಿರದಿದ್ದರೂ ಸಹ ಬೇಸಾಯದಲ್ಲಿ ತೊಡಗಿರುವ ಕೃಷಿಕನು ಜಮೀನು ಮಾಲೀಕರಿಂದ ಸಾಮಾನ್ಯ ವ್ಯವಹಾರಿಕ ಅಧಿಕಾರ (GPA) ಹೊಂದಿದ್ದ ಪಕ್ಷದಲ್ಲಿ (ಭೂ ಸುಧಾರಣೆಯ ಕಾಯ್ದೆಯ ನಿಯಮಗಳಿಗೆ ಒಳಪಟ್ಟು) ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿರುತ್ತದೆ.

  • ಬೆಳೆ ಸ್ಪರ್ಧೆಗೆ ಸ್ಪರ್ಧಿಸಲು ಅನರ್ಹತೆ:

1. ಯಾವುದೇ ಹಂತದಲ್ಲಿ ಒಮ್ಮೆ ಬಹುಮಾನ ಪಡೆದ ರೈತ/ರೈತ ಮುಂದಿನ ಐದು ವರ್ಷಗಳ ಅವಧಿಗೆ ಆ ಹಂತದ ಬೆಳೆ ಸ್ಪರ್ಧೆಯ ಬಹುಮಾನಕ್ಕೆ ಅರ್ಹನಾಗಿರುವುದಿಲ್ಲ.ಆದರೆ ಆ ಬೆಳೆಯ ಮೇಲಿನ ಹಂತದ ಸ್ಪರ್ದೆಯಲ್ಲಿ ಭಾಗವಹಿಸಬಹುದಾಗಿರುತ್ತದೆ.

2. ರಾಜ್ಯ ಮತ್ತು ಜಿಲ್ಲಾ ಮಟ್ಟಗಳಲ್ಲಿ ರಚಿಸಲಾಗಿರುವ ವಿವಿಧ ಸಮಿತಿ ತಂಡಗಳಲ್ಲಿ/ ಕಾರ್ಯನಿರ್ವಹಿಸುತ್ತಿರುವ ಸದಸ್ಯರುಗಳು ಮತ್ತು ಅವರ ಕುಟುಂಬದ ಸದಸ್ಯರು ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ.

3. ಕನಿಷ್ಠ ವಿಸ್ತೀರ್ಣ ಒಂದು ಎಕರೆ ಇರಬೇಕು.

4. ಒಬ್ಬ ಅರ್ಜಿದಾರನು ಒಂದೇ ವರ್ಷದಲ್ಲಿ ಒಂದಕ್ಕಿಂತ ಹೆಚ್ಚಿನ ಬೆಳೆಗಳಿಗೆ ಸ್ಪರ್ಧಿಸಬಹುದಾಗಿದ್ದು ಇದರಲ್ಲಿ ಯಾವುದಾದರೂ ಒಂದು ಬೆಳೆಯ ಹೆಚ್ಚಿನ ಮೌಲ್ಯದ ಪ್ರಶಸ್ತಿ ಪಡೆಯಲು ಮಾತ್ರ ಅರ್ಹರಾಗಿರುತ್ತಾರೆ.

  • ಕೃಷಿ ಪಂಡಿತ ಪ್ರಶಸ್ತಿ ಬಹುಮಾನದ ಮೊತ್ತ:

ಕೃಷಿ ಪಂಡಿತ -ಪ್ರಥಮ – 1,25,000

ಕೃಷಿ ಪಂಡಿತ-ದ್ವೀತಿಯ – 1,00,000

ಕೃಷಿ ಪಂಡಿತ-ತೃತೀಯ – 75,000ಕೃಷಿ ಪಂಡಿತ ಉದಯೋನ್ಮುಖ – ತಲಾ 50,000

Share this Article
Subscribe
Notify of
guest
0 Comments
Inline Feedbacks
View all comments
error:

Join Our

Group