ಕಲ್ಯಾಣ ಯೋಜನೆಯಡಿಯಲ್ಲಿ ಕೊಳವೆ ಬಾವಿ ಕೊರೆಯಲು 2 ಲಕ್ಷ ₹ ಸಹಾಯಧನ

ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಕೊಳವೆ ಬಾವಿ ಕೊರೆಯಲು 2 ಲಕ್ಷ ರೂಪಾಯಿಯವರೆಗೆ ಸಹಾಯಧನ ನೀಡಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.ಹೌದು, ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ 2022-23ನೇ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಯಲು ರೈತರಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಹಿಂದುಳಿದ ವರ್ಗಗಳ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ, ಹಳ್ಳಿಕಾರ್, ಕುಂಚಿಟಿಗ, ಕಾಪು, ಹೆಗ್ಗಡೆ, ಕಮ್ಮ, ರಡ್ಡಿ, ಗೌಂಡರ್, ನಾಮಧಾರಿ ಗೌಡ, ಉಪ್ಪಿನ ಕೊಳಗ, ಉತ್ತಮ ಕೊಳಗ ಒಕ್ಕಲಿಗ ಸಮುದಾಯದವರಿಂದ ಅರ್ಜಿ ಕರೆಯಲಾಗಿದೆ.

ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆ ಸಲ್ಲಿಸಬೇಕು?

ಅರ್ಜಿದಾರರು 2 ಪಾಸ್ ಪೋರ್ಟ್ ಅಳತೆಯ ಫೋಟೊಗಳನ್ನು ಹೊಂದಿರಬೇಕು. ತಹಶೀಲ್ದಾರರಿಂದ ಪಡೆದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಲಗತ್ತಿಸಬೇಕು. ಕಂದಾಯ ಇಲಾಖೆಯ ತಹಶೀಲ್ದಾರ್ ಅಥವಾ ಉಪ ತಹಶೀಲ್ದಾರ ಇವರು ನೀಡಿದ ಅರ್ಜಿದಾರರ ಭೂ ಹಿಡುವಳಿ, ಸಣ್ಣ ಹಾಗೂ ಅತೀ ಸಣ್ಣ ರೈತರ ದೃಢೀಕರಣ ಪತ್ರಗಳನ್ನು ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಣ ಮಾಡಿದ ಪ್ರತಿ ಲಗತ್ತಿಸಬೇಕು. ಹಾಲಿ ಜಮೀನಿನಲ್ಲಿ ನೀರಾವರಿ ಸೌಲಭ್ಯ ಇಲ್ಲದೆ ಇರುವ ಬಗ್ಗೆ ಕಂದಾಯ ಇಲಾಖಾ ಅಧಿಕಾರಿಗಳಿಂದ ದೃಢೀಕರಣ ಪತ್ರ ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಣ ಮಾಡಿದ ಪ್ರತಿ ಲಗತ್ತಿಸಬೇಕು.

ರೇಷನ್ ಕಾರ್ಡ್ ಝರಾಕ್ಸ್ ಪ್ರತಿ ಹಾಗೂ ವಾಸಸ್ಥಳ ಪ್ರಮಾಣ ಪತ್ರ ಲಗತ್ತಿಸಬೇಕು. ಜಮೀನಿನ ಪಹಣಿ (ಆರ್.ಟಿಸಿ) ಮೂಲ ಪ್ರಮಾಣ ಪತ್ರ ಲಗತ್ತಿಸಬೇಕು. ಅರ್ಜಿದಾರನ ಹೆಸರಿನಲ್ಲಿ ಜಮೀನಿನ ಖಾತಾ ಆಗಿರುವ ಬಗ್ಗೆ ಖಾತಾ ಉದ್ದರಣಾ ಎಕ್ಸಟ್ರ್ಯಾಕ್ಟ್ ಸಲ್ಲಿಸಬೇಕು. ಕುಟುಂಬದ ವಂಶವೃಕ್ಷ ಲಗತ್ತಿಸಬೇಕು.

ಅರ್ಜಿ ಎಲ್ಲಿ ಸಲ್ಲಿಸಬೇಕು?

ಅರ್ಜಿಯನ್ನು ನಿಗಮದ ವೆಬ್ ಸೈಟ್ ನಿಂದ ಡೌನ್ಲೋಡ್ ಮಾಡಿ ಭರ್ತಿ ಮಾಡಿದ ನಂತರ ಅಗತ್ಯ ದಾಖಲಾತಿಗಳೊಂದಿಗೆ ಆಯಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಕಚೇರಿಯಲ್ಲಿ ಸಲ್ಲಿಸಲು ಕೋರಲಾಗಿದೆ.

ಆಗಸ್ಟ್ 18 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಆಸಕ್ತ ಫಲಾನುಫೇಕ್ಷಿಗಳು ಯೋಜನೆಗಳ ಷರತ್ತು ಮತ್ತು ನಿಬಂಧನೆಗಳನ್ನು ಹಾಗೂ ಹೆಚ್ಚಿನ ಮಾಹಿತಿಯನ್ನು ನಿಗಮದ ವೆಬ್ ಸೈಟ್ನಲ್ಲಿ ವೀಕ್ಷಿಸಬಹುದು. ಹೆಚ್ಚಿನ ಮಾಹಿತಿಗಾಗಿ ರೈತರು ನಿಗಮದ ಕೇಂದ್ರ ಕಚೇರಿಯ ದೂರವಾಣಿ ಸಂಖ್ಯೆ 080 29904268 ಗೆ ಸಂಪರ್ಕಿಸಲು ಕೋರಲಾಗಿದೆ.

Share this Article
Subscribe
Notify of
guest
0 Comments
Inline Feedbacks
View all comments
error:

Join Our

Group