ಮನೆಕಟ್ಟಲು ಅಥವಾ ಹಾನಿಯಾದ ಮನೆ ಸರಿಪಡಿಸಲು ಪಿಎಂ ಆವಾಸ್ ಯೋಜನಾ ಅಡಿಯಲ್ಲಿ ಅರ್ಜಿ ಆಹ್ವಾನ ಅಗಸ್ಟ 30 ಕೊನೆಯ ದಿನಾಂಕ

ಮನೆ ಎನ್ನುವುದು ಮಾನವನ ಮೂಲಭೂತ ಅಗತ್ಯವಾಗಿದ್ದು, ದೇಶದ ಪ್ರತಿಯೊಬ್ಬರಿಗೂ 2022ರ ಹೊತ್ತಿಗೆ ಮನೆ ಸಿಗಬೇಕು ಎನ್ನುವುದು ಪ್ರಧಾನಿ ಮೋದಿಯವರ ಆಶಯ. ಈ ಆಶಯಕ್ಕಾಗಿ ಕೇಂದ್ರ ಸರ್ಕಾರ “ಪ್ರಧಾನ ಮಂತ್ರಿ ಅವಾಸ ಯೋಜನೆ” (Pradhan ,Mantri Awas Yojana) ಪ್ರಾರಂಭಿಸಿದೆ. ಇದರಲ್ಲಿ ಬಡವರು, ಅತಿ ಕೆಳವರ್ಗದವರು, ಮಧ್ಯಮ ವರ್ಗದವರು, ಕಡಿಮೆ ಆದಾಯ ಹೊಂದಿರುವವರು, ನೌಕರರು ಹೀಗೆ ಎಲ್ಲರೂ ಒಳಗೊಂಡಿದ್ದಾರೆ.

ಇದು ಆರ್ಥಿಕವಾಗಿ ದುರ್ಬಲ, ಕಡಿಮೆ-ಆದಾಯದ ಮತ್ತು ಮಧ್ಯಮ-ಆದಾಯದ ಗುಂಪುಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಗೆ ವಸತಿ ಸಾಲಗಳ ಮೇಲಿನ ಬಡ್ಡಿ ಸಬ್ಸಿಡಿಗಳನ್ನು ಸಹ ನೀಡುತ್ತದೆ. ಅಂದಹಾಗೆ ಈ ಕಾರ್ಯಕ್ರಮವನ್ನು ಕ್ರಮವಾಗಿ ನಗರ ಮತ್ತು ಗ್ರಾಮೀಣ ಜನರಿಗೆ ಅನುಕೂಲವಾಗುವ ಪಿಎಂಎವೈ ನಗರ (PMAY – U) ಮತ್ತು ಪಿಎಂಎವೈ ಗ್ರಾಮೀಣ (PMAY – G) ಎಂದು ಎರಡು ವಿಭಾಗಗಳಾಗಿ ವಿಂಗಡಿಸಲಾಗಿದೆ.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ವೆಬ್ ಸೈಟ್ ಹೆಸರು ಮತ್ತು ವಿಧಾನ:

ಹಂತ 1: ನೀವು PMAYಗೆ ಅರ್ಹತೆ ಪಡೆದ ವರ್ಗವನ್ನು ಗುರುತಿಸಿ.

ಹಂತ 2: ಆ ನಂತರ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ: https://pmaymis.gov.in/ಹಂತ

3: ಮುಖ್ಯ ಮೆನುವಿನಲ್ಲಿ ‘Citizen Assessment’ ಕ್ಲಿಕ್ ಮಾಡಿ ಮತ್ತು ಅರ್ಜಿದಾರರ ವರ್ಗವನ್ನು ಆಯ್ಕೆ ಮಾಡಿ.ಹಂತ

4: ನಿಮ್ಮನ್ನು ಬೇರೆ ಪುಟಕ್ಕೆ ಮರು ನಿರ್ದೇಶಿಸಲಾಗುತ್ತದೆ, ಅಲ್ಲಿ ನಿಮ್ಮ ಆಧಾರ್ ವಿವರಗಳನ್ನು ನಮೂದಿಸಬೇಕು.ಹಂತ

5: ನಿಮ್ಮ ವೈಯಕ್ತಿಕ, ಆದಾಯ, ಬ್ಯಾಂಕ್ ಖಾತೆ ವಿವರಗಳು ಮತ್ತು ಪ್ರಸ್ತುತ ವಸತಿ ವಿಳಾಸದೊಂದಿಗೆ ಆನ್‌ಲೈನ್ PMAY ಅರ್ಜಿಯನ್ನು ಭರ್ತಿ ಮಾಡಿ.ಹಂತ

6: ಕ್ಯಾಪ್ಚಾ ಕೋಡ್ ಅನ್ನು ನಮೂದಿಸಿ, ನಿಖರತೆಗಾಗಿ ವಿವರಗಳನ್ನು ಪರಿಶೀಲಿಸಿ ಮತ್ತು ಅದನ್ನು ಸಲ್ಲಿಸಿ.

ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳನ್ನು ವಾರ್ಷಿಕ ಆದಾಯದ ಆದಾರದಲ್ಲಿ ಈ ರೀತಿ ವರ್ಗೀಕರಿಸಬಹುದು:

ಮಧ್ಯಮ ಆದಾಯ ಗುಂಪು 1 (MIG1): 6 ಲಕ್ಷದಿಂದ 12 ಲಕ್ಷ ರೂ

ಮಧ್ಯಮ ಆದಾಯ ಗುಂಪು 2 (MIG2): 12 ಲಕ್ಷದಿಂದ 18 ಲಕ್ಷ ರೂ

ಕಡಿಮೆ ಆದಾಯದ ಗುಂಪು (ಎಲ್‌ಐಜಿ) : 3 ಲಕ್ಷದಿಂದ 6 ಲಕ್ಷ ರೂಆರ್ಥಿಕವಾಗಿ ಹಿಂದುಳಿದ ವರ್ಗ (EWS): 3 ಲಕ್ಷದವರೆಗೆ

ಫಲಾನುಭವಿ ಕುಟುಂಬವು ಪತಿ, ಪತ್ನಿ, ಅವಿವಾಹಿತ ಪುತ್ರರು ಮತ್ತು ಅವಿವಾಹಿತ ಪುತ್ರಿಯರನ್ನು ಒಳಗೊಂಡಿದೆ.

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ:ಆನ್‌ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ದಿನಾಂಕ : 8-08-2022 ರಿಂದ ದಿನಾಂಕ : 30-09-2022 ರೊಳಗೆ ಸಲ್ಲಿಸಲು ಅವಕಾಶವಿರುತ್ತದೆ

Share this Article
Subscribe
Notify of
guest
0 Comments
Inline Feedbacks
View all comments
error:

Join Our

Group