ಜೀರಿಗೆ ನೀರನ್ನು ಕುಡಿಯುವುದರಿಂದಾಗುವ ಪ್ರಯೋಜನಗಳು:

ಕೇರಳ, ತಮಿಳುನಾಡುಗಳಲ್ಲಂತೂ ಹೋಟೆಲುಗಳಲ್ಲಿ ಕುಡಿಯಲು ನೀಡುವುದೇ ಜೀರಿಗೆ ನೀರು. ಇದು ಜೀರಿಗೆಯ ಹಲವಾರು ಪೋಷಕಾಂಶಗಳನ್ನು ನೀರಿನ ಮೂಲಕ ಸಡಿಲಗೊಳಿಸಿ ನೀಡುವ ಮೂಲಕ ಜೀರ್ಣಕ್ರಿಯೆ ಸುಗಮಗೊಳ್ಳಲು ನೆರವಾಗುತ್ತದೆ. ತೂಕ ಇಳಿಸಲು ನೆರವಾಗುತ್ತದೆ ಹಾಗೂ ರೋಗ ನಿರೋಧಕ ಶಕ್ತಿಯನ್ನೂ ಹೆಚ್ಚಿಸುತ್ತದೆ.
#ಮಲಬದ್ಧತೆ, ಅಜೀರ್ಣ, ಆಮ್ಲೀಯತೆ, ಗ್ಯಾಸ್ ಇತ್ಯಾದಿ ಎಲ್ಲಾ ಸಮಸ್ಯೆಗಳನ್ನು ತೆಗೆದುಹಾಕುತ್ತದೆ. ನಿಮ್ಮ ಜೀರ್ಣಕ್ರಿಯೆಯ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ. ತ್ವರಿತ ಜೀರ್ಣಕ್ರಿಯೆಯ ಪ್ರಕ್ರಿಯೆಯಿಂದಾಗಿ ಆಹಾರವು ತ್ವರಿತವಾಗಿ ಜೀರ್ಣವಾಗುತ್ತದೆ. ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.
#ಅರ್ಧ ಚಮಚ ಜೀರಿಗೆಯನ್ನು ಒಂದು ಲೀಟರ್ ನೀರಿನಲ್ಲಿ ಹಾಕಿ ಚೆನ್ನಾಗಿ ಕುದಿಸಿ ಆರಿಸಿ. ಪ್ರತಿನಿತ್ಯ ಕುಡಿಯುವುದರಿಂದ ರಕ್ತ ಶುದ್ಧಿಯಾಗುತ್ತದೆ. 15 ರಿಂದ 20 ದಿನದವರೆಗೆ ಸೇವಿಸುವುದರಿಂದ ಚರ್ಮರೋಗ ಕಡಿಮೆಯಾಗುತ್ತದೆ. ಅರ್ಧ ಲೋಟ ನೀರಿಗೆ ಅರ್ಧ ಚಮಚ ಜೀರಿಗೆ ಹಾಕಿ, ಕುದಿಸಿ ಶೋಧಿಸಿ ಹಾಲು ಬೆರೆಸಿ ಕಷಾಯ ತಯಾರಿಸಿ ಕುಡಿದರೆ ಆರೋಗ್ಯ ಸುಧಾರಿಸುತ್ತದೆ. ಜೀರಿಗೆ ನೀರು ಮತ್ತು ಜೀರಿಗೆ ಕಷಾಯ ರಕ್ತದ ಒತ್ತಡವನ್ನು ಸರಿ ಪಡಿಸುತ್ತದೆ. ಪಿತ್ತ ಮತ್ತು ಅಜೀರ್ಣದಿಂದ ಆಗುವ ತೊಂದರೆಗಳನ್ನು ಸರಿ ಪಡಿಸುತ್ತದೆ.
#ಜೀರಿಗೆ ನೀರಿನಲ್ಲಿ ಹೇರಳವಾಗಿ ವಿಟಮಿನ್-ಇ ಕಂಡುಬರುತ್ತದೆ. ಇದು ಚರ್ಮಕ್ಕೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಇದು ನಿಮ್ಮ ಚರ್ಮವನ್ನು ಬಿಗಿಯಾಗಿ ಮತ್ತು ಹೊಳೆಯುವಂತೆ ಮಾಡುತ್ತದೆ. ಇದು ಚರ್ಮದ ಮೇಲೆ ಸುಕ್ಕುಗಳನ್ನು ಕಡಿಮೆ ಮಾಡುತ್ತದೆ.
#ನೆನೆಸಿದ ಮೆಂತ್ಯದ ಬೀಜ, ಜೀರಿಗೆ, ಉಪ್ಪು ಹಾಗೂ ಖಾರ ಹಾಕಿ ಚಟ್ನಿ ತಯಾರಿಸಿ ಚಪಾತಿ ಜೊತೆ ಸೇವಿಸಿ ದೇಹದ ತೂಕ ಕಡಿಮೆ ಯಾಗುತ್ತದೆ. ಜೀರಿಗೆ, ಸಕ್ಕರೆ, ಒಣಶುಂಠಿ ಮತ್ತು ಅಡಿಗೆ ಉಪ್ಪು ಇವುಗಳನ್ನು ಒಂದೊಂದು ಟೀ ಚಮಚದಷ್ಟು ತೆಗೆದುಕೊಂಡು ನುಣ್ಣಗೆ ಪುಡಿ ಮಾಡಿ ಒಂದು ಲೋಟ ಬಿಸಿ ನೀರಿಗೆ ಹಾಕಿ ಒಂದು ಹೋಳು ನಿಂಬೆಹಣ್ಣಿನ ರಸವನ್ನು ಸೇರಿಸಿ ಕಫ ಸಮಸ್ಯೆ ನಿವಾರಣೆಯಾಗುತ್ತದೆ.
#ಜೀರಿಗೆ ನೀರಿನಿಂದ ಕರಗುತ್ತೆ ದೇಹದ ಕೊಬ್ಬು: ನಮ್ಮ ದೇಹದಲ್ಲಿ ಸಂಗ್ರಹವಾಗಿರುವ ಕೊಬ್ಬಿನಲ್ಲಿ ಅತಿ ಕಷ್ಟದಿಂದ ಕರಗುವ ಸೊಂಟದ ಕೊಬ್ಬನ್ನು ತೊಡೆದು ಹಾಕಲು ಜೀರಿಗೆ ನೀರು ಉಪಯುಕ್ತವಾಗಿದೆ. ತನ್ಮೂಲಕ ತೂಕ ಇಳಿಕೆಗೆ ನೆರವಾಗುತ್ತದೆ. ಅದರಲ್ಲೂ ಒಂದು ಗ್ಲಾಸ್ ಜೀರಿಗೆ ನೀರಿನಿಂದ ನಿಮ್ಮ ದಿನವನ್ನು ಪ್ರಾರಂಭ ಮಾಡಿದರೆ ಆರೋಗ್ಯಕರ ಜೀವನಶೈಲಿ ನಿಮ್ಮದಾಗುವುದರ ಜೊತೆಗೆ 15 ಕೆ.ಜಿವರೆಗೆ ಇಳಿಸಿಕೊಳ್ಳಬಹುದು ಅಂತಾರೆ ತಜ್ಞರು.
#ಅಸಿಡಿಟಿಯನ್ನೂ ಹೋಗಲಾಡಿಸುತ್ತದೆ:ನೀವು ಅಸಿಡಿಟಿ ಅಥವಾ ಯಾವುದೇ ರೀತಿಯ ಜೀರ್ಣಕಾರಿ ಸಮಸ್ಯೆಯನ್ನು (Digestion problem) ಹೊಂದಿದ್ದರೆ ಜೀರಿಗೆ ನೀರನ್ನು (Jeera Water) ಸೇವಿಸಬಹುದು. ಅತಿಸಾರ ಮತ್ತು ಜೀರ್ಣಕಾರಿ ಸಮಸ್ಯೆಗಳನ್ನು ತೊಡೆದುಹಾಕಲು ನೀವು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನಿಂಬೆಯೊಂದಿಗೆ ಜೀರಿಗೆ ನೀರನ್ನು ಕುಡಿಯಬಹುದು. ಜೀರಿಗೆ ನೀರು ಕ್ಯಾನ್ಸರ್‌ನಂತಹ ಕಾಯಿಲೆಗಳಲ್ಲಿ ಸಹ ಪ್ರಯೋಜನಕಾರಿಯಾಗಿದೆ. ಇದನ್ನು ಕುಡಿಯುವುದರಿಂದ ಈ ಕ್ಯಾನ್ಸರ್ ಬರುವ ಸಾಧ್ಯತೆ ಕಡಿಮೆಯಾಗುತ್ತದೆ ಎಂದು ಹೇಳಲಾಗುತ್ತದೆ.
#ಪ್ರತಿರೋಧಕ ಶಕ್ತಿ ವೃದ್ಧಿ:ಕಬ್ಬಿನಾಂಶ ಮತ್ತು ಆಹಾರದ ನಾರಿನಾಂಶವನ್ನು ಹೊಂದಿರುವಂತಹ ಜೀರಿಗೆಯು ಜೀರ್ಣಕ್ರಿಯೆ ವ್ಯವಸ್ಥೆಯನ್ನು ಆರೋಗ್ಯವಾಗಿಡುವುದರ ಜತೆಗೆ ಪ್ರತಿರೋಧಕ ಶಕ್ತಿ ವೃದ್ಧಿಸುವುದು. ಜೀರಿಗೆಯಲ್ಲಿ ಉನ್ನತ ಮಟ್ಟದ ವಿಟಮಿನ್ ಎ ಮತ್ತು ಸಿ ಇದೆ. ಇವುಗಳು ಆಂಟಿಆಕ್ಸಿಡೆಂಟ್ ಗಳಾಗಿ ಕೆಲಸ ಮಾಡಿ ಸೋಂಕು ವಿರುದ್ಧ ಹೋರಾಡುವುದು