ವಿಧದ ರೋಗಗಳಿಗೂ ಅಳಲೆ ಕಾಯಿಯೇ ಮದ್ದು..!

ಅಳಲೆ ಕಾಯಿದಕ್ಷಿಣ ಏಷ್ಯಾದಲ್ಲಿ ಹೆಚ್ಚಾಗಿ ಕಂಡು ಬರುವ ಮರ. ವೈಜ್ಞಾನಿಕವಾಗಿ ಟರ್ಮಿನೆಲಿಯಾ ಚೆಬುಲ (Terminalia chebula) ಎಂದು ಕರೆಯುತ್ತಾರೆ. ‘ಕಾಂಬ್ರೆಟೇಸಿ’ (Combretaceae)ಎಂಬ ಸಸ್ಯ ಕುಟುಂಬಕ್ಕೆ ಸೇರುತ್ತದೆ. ಸಣ್ಣ ಮಕ್ಕಳಿಂದ ಹಿಡಿದು ವಯಸ್ಕರವರೆಗೆ ಎಲ್ಲಾ ವಿಧದ ರೋಗಗಳಿಗೂ ಅಳಲೆ ಕಾಯಿಯೇ ಮದ್ದು. ಆಯುರ್ವೇದ ಶಾಸ್ತ್ರದಲ್ಲಿ ಔಷಧಿಗಳ ರಾಜನೆಂದೇ ಈ ಸಸ್ಯವನ್ನು ಕರೆಯುತ್ತಾರೆ. ಇದು ಎಲ್ಲಾ ಕಡೆಗಳಲ್ಲಿ ಸಾಮಾನ್ಯವಾಗಿ ಬೆಳೆಯುವ ಮಧ್ಯಮ ಗಾತ್ರದ ಮರ. ಮುಪ್ಪನ್ನು ಗೆಲ್ಲುವ, ಯೌವ್ವನವನ್ನು ಕಾಪಾಡುವ, ಅನೇಕ ವ್ಯಾಧಿಗಳನ್ನು ನಿವಾರಿಸುವ, ತ್ರಿದೋಷಗಳನ್ನು ಪರಿಹರಿಸುವ ಹಾಗೂ ಹೃದಯಕ್ಕೆ ಶಕ್ತಿ ನೀಡುವ ಬಹು ಶ್ರೇಷ್ಟ ಗುಣಗಳಿಂದ ಕೂಡಿದೆ. ಇದನ್ನು ಸಂಸ್ಕೃತದಲ್ಲಿ ಹರಿತಕೀ ಎಂದು ಕರೆಯುತ್ತಾರೆ.
ಆಯುರ್ವೇದ ಶಾಸ್ತ್ರಗಳಲ್ಲಿ ದೀರ್ಘವಾಗಿ ಚರ್ಚಿಸಲ್ಪಡುವ ವಾತ, ಪಿತ್ತ, ಕಫಗಳ ಸಮಸ್ಯೆಗಳನ್ನು ನಿವಾರಿಸುವ ಮದ್ದಾಗಿ ಬಳಕೆಯಲ್ಲಿ ಇದೆ. ನೆಗಡಿ, ಕೆಮ್ಮು, ಜ್ವರ ಮುಂತಾದ ಸಾಮಾನ್ಯ ವ್ಯಾಧಿಯಿಂಧ ಹಿಡಿದು, ಕಾಮಾಲೆ, ಅಸ್ತಮಾ, ಮೂಲವ್ಯಾಧಿ, ಮತ್ತು ಹೃದ್ರೋಗದಂತಹ ಗಂಭೀರ ವ್ಯಾಧಿಗಳಲ್ಲಿಯೂ ಅಳಲೆಕಾಯಿ ಪರಿಣಾಮಕಾರಿಯಾದ ಔಷಧಿಯಾಗಿ ಬಳಕೆಯಲ್ಲಿದೆ. ದೇಹದ ಯಾವುದೇ ಭಾಗದಲ್ಲಿ ಗಾಯಗಳಾದರೂ ಅಳಲೆಕಾಯಿ ರಸಲೇಪನದಿಂದ ಉಪಶಮನ ಮಾಡಬಹುದು. ಅಳಲೆ ಕಾಯಿಯ ಪುಡಿಯನ್ನು ನೀರಿನೊಂದಿಗೆ ಬೆರೆಸಿ,ಬಾಯಿ ಮುಕ್ಕಳಿಸಿ ಉಗುಳುವುದರಿಂದ ಬಾಯಿಹುಣ್ಣು ಮತ್ತಿತರ ವಸಡು ದೋಷಗಳಿಗೆ ರಾಮಬಾಣ. ಜೀರ್ಣಶಕ್ತಿಯನ್ನು ವ್ರದ್ದಿಸಲು ಮಲಬದ್ಧತೆಯನ್ನು ನೀಗಿಸುವಲ್ಲಿ ಪರಿಣಾಮಕಾರಿಯಾಗಿದೆ.
ಎಲ್ಲಾ ಪ್ರಕಾರದ ಕಣ್ಣುಗಳ ಬೇನೆಗೂ,ಅಳಲೆ ಕಾಯಿ ಉಪಯೋಗಕಾರಿಯಾಗಿದೆ. ಪ್ರತಿದಿನ ಮುಂಜಾನೆ ಅಳಲೆ ಕಾಯಿ ಕಷಾಯವನ್ನು ಕುಡಿಯುವುದರಿಂದ ದೇಹದ ಉಷ್ಣತೆಯನ್ನು ಸಮತೋಲನದಲ್ಲಿಡುವುದರ ಜೊತೆಗೆ, ದೇಹದಲ್ಲಿ ಶೇಖರಿಸಲ್ಪಟ್ಟ ಅನಗತ್ಯ ಕೊಬ್ಬನ್ನು ಕರಗಿಸುತ್ತದೆ.
ಗಮನಿಸಿ: ಗರ್ಭಿಣಿಯರು ಅಳಲೆ ಕಾಯಿಯನ್ನು ಸೇವಿಸುವಂತಿಲ್ಲ. ಏಕೆಂದರೆ, ಇದರ ಸೇವನೆಯಿಂದ ಗರ್ಭಪಾತದ ಸಾಧ್ಯತೆಗಳು ಹೆಚ್ಚೆಂದು ಹಿರಿಯರು ಅಭಿಪ್ರಾಯಪಡುತ್ತಾರೆ.
ಇನ್ನಿತರ ಪ್ರಯೋಜನಗಳು;
* ಅಳಲೆ ಕಾಯಿ ಅಗಿದು ತಿಂದರೆ ಜಠರಾಗ್ನಿಯನ್ನು ಉದ್ದೀಪನಗೊಳಿಸಿ ಹಸಿವನ್ನು ಹೆಚ್ಚಿಸುತ್ತದೆ.
* ತೇಯ್ದು ಉಪಯೋಗಿಸಿದರೆ ಮಲಬದ್ಧತೆ ನಿವಾರಣೆಯಾಗುತ್ತದೆ.
* ಬೆಲ್ಲದೊಂದಿಗೆ ಸೇವಿಸಿದರೆ ತ್ರಿದೋಷಗಳ ನಿವಾರಣೆ.
* ಒಣ ಶುಂಠಿಯೊಂದಿಗೆ ಸೇವಿಸಿದರೆ ಕಫ ನಿವಾರಣೆ.
* ತುಪ್ಪ ಬೆರೆಸಿ ಸೇವಿಸಿದರೆ ಪಿತ್ತ ನಿವಾರಣೆ.
* ಸೈಂಧವಲವಣ ಸೇರಿಸಿ ಸೇವಿಸಿದರೆ ವಾತ ನಿವಾರಣೆ
* ಅಳಲೆ ಕಾಯಿ ಚೂರ್ಣ ಒಣ ಶುಂಠಿ ಸೇರಿಸಿ ಕಷಾಯ ತಯಾರಿಸಿ ಆರಿದ ನಂತರ ಜೇನು ಬೆರೆಸಿ ಕುಡಿದರೆ ಕೆಮ್ಮು ಕಫ ನಿವಾರಣೆ ಆಗುತ್ತದೆ.
* ಕಾಲಿನ ಬೆರಳುಗಳ ನಡುವೆ ಕಾಲು ಉರಿಯಾದರೆ ಅಳಲೆ ಕಾಯಿ ಚೂರ್ಣ ಅಥವಾ ತ್ರಿ ಫಲಾ ಚೂರ್ಣ ಹಚ್ಚಬಹುದು.