ಮಖಾನ ಬೀಜಗಳ ಪ್ರಯೋಜನ!

ಮಖಾನಾದಲ್ಲಿ ಆಂಟಿ ಆಕ್ಸಿಡೆಂಟ್ ಗುಣಗಳಿವೆ. ಇದರ ಸೇವನೆಯಿಂದ ಜೇರ್ಣಕ್ರಿಯೆ ಉತ್ತಮವಾಗಿರುತ್ತದೆ ಹಾಗು ಈ ಬೀಜವನ್ನು ಪ್ರತಿಯೊಂದು ವಯಾಸ್ಸಿನವರು ಸುಲಭವಾಗಿ ಜೀರ್ಣಿಸಿಕೊಳ್ಳಬ್ನಹುದು.ಇದರಲ್ಲಿ ಕೊಲೆಸ್ಟ್ರಾಲ್, ಸ್ಯಾಚುರೇಟೆಡ್ ಕೊಬ್ಬು ಮತ್ತು ಸೋಡಿಯಂ ಕಡಿಮೆ ಇರುವುದರಿಂದ ಮಖಾನಾ ಹೃದಯಕ್ಕೆ ಉತ್ತಮ ಆಹಾರವಾಗಿದೆ. ಬೀಜಗಳು ಮೆಗ್ನೀಸಿಯಮ್, ಪೊಟ್ಯಾಸಿಯಮ್, ಮ್ಯಾಂಗನೀಸ್, ಪ್ರೋಟೀನ್ ಮತ್ತು ರಂಜಕದ ಅತ್ಯುತ್ತಮ ಮೂಲವಾಗಿದೆ. ಹೆಚ್ಚಿನ ಪೌಷ್ಠಿಕಾಂಶವು ಮಖಾನಾಗಳನ್ನು ಅತ್ಯಂತ ಆರೋಗ್ಯಕರ ಎಂದು ಪರಿಗಣಿಸಲಾಗಿದೆ.

#ಮಧುಮೇಹಿಗಳಿಗೆ ಸಹಕಾರಿ:ಮಖಾನ ಬೀಜಗಳು ಮಧುಮೇಹಿ ಮತ್ತು ಹೃದಯ ರಕ್ತನಾಳಗಳ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಬಹಳ ಒಳ್ಳೆಯ ಆಹಾರ ಎನಿಸಿವೆ. ಏಕೆಂದರೆ ಇವುಗಳಲ್ಲಿ ದೇಹಕ್ಕೆ ಅಗತ್ಯವಿರುವ ಒಳ್ಳೆಯ ಕೊಬ್ಬಿನ ಅಂಶಗಳು ಹೇರಳವಾಗಿದ್ದು, ಸ್ಯಾಚುರೇಟೆಡ್ ಕೊಬ್ಬಿನ ಅಂಶಗಳು ಬಹಳಷ್ಟು ಕಡಿಮೆ ಇವೆ. ಇದೊಂದೇ ಕಾರಣದಿಂದ ಮನುಷ್ಯನ ದೇಹದ ತೂಕವನ್ನು ಕಡಿಮೆ ಮಾಡಬಲ್ಲ ಶಕ್ತಿಯನ್ನು ಮಖಾನ ಬೀಜಗಳು ಪಡೆದಿವೆ ಎಂದು ಯಾರು ಬೇಕಾದರೂ ಹೇಳಬಹುದು.

#ಮಖಾನ ಬೀಜಗಳಲ್ಲಿ ಮ್ಯಾಗ್ನಿಷಿಯಂ ಮತ್ತು ಪೊಟ್ಯಾಷಿಯಂ ಅಂಶ ಹೆಚ್ಚಿದ್ದು ಸೋಡಿಯಂ ಅಂಶ ಕಡಿಮೆ ಇದೆ. ಇದು ದೇಹದ ತೂಕದ ಮೇಲೆ ಗಮನ ಇಟ್ಟು ಡಯಟ್ ಮಾಡುತ್ತಿರುವ ಮಂದಿಗೆ ಬಹಳಷ್ಟು ಸಹಾಯಕ ಎಂದು ಆರೋಗ್ಯ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಧಿಕ ರಕ್ತದ ಒತ್ತಡ ಹೊಂದಿರುವ ಜನರಿಗೆ ಮಖಾನ ಬೀಜಗಳು ಹೇಳಿ ಮಾಡಿಸಿದ ಆಹಾರಗಳಾಗಿವೆ. ಏಕೆಂದರೆ ಇವುಗಳಲ್ಲಿ ಹೆಚ್ಚಿನ ಪೊಟ್ಯಾಶಿಯಂ ಅಂಶ ಮತ್ತು ಕಡಿಮೆ ಸೋಡಿಯಂ ಅಂಶ ಇರುವುದರಿಂದ ರಕ್ತದ ಒತ್ತಡದಲ್ಲಿ ಯಾವುದೇ ಬಗೆಯ ಹೆಚ್ಚು ಕಡಿಮೆ ಆಗದೇ ನಿಯಂತ್ರಣದಲ್ಲಿರುತ್ತದೆ

#ಮಖಾನ ಬೀಜಗಳಲ್ಲಿ ಪ್ರೋಟೀನ್ ಅಂಶ ಅಧಿಕವಾಗಿದೆ. ಡಯಟ್ ಮಾಡಿ ದೇಹದ ತೂಕ ಕರಗಿಸಿಕೊಳ್ಳುವ ವ್ಯಕ್ತಿಗಳಿಗೆ ಉಪವಾಸದ ಸಮಯದಲ್ಲಿ ಇವುಗಳು ಸಹಾಯಕ್ಕೆ ಬರುತ್ತವೆ. ಬಿಡಿಸಿ ಹೇಳಬೇಕೆಂದರೆ ಬೆಳಗಿನ ಸಮಯದಲ್ಲಿ ಒಂದು ಹಿಡಿ ಮಖಾನ ಬೀಜಗಳನ್ನು ಸೇವಿಸಿದರೆ ಇಡೀ ದಿನ ಹಸಿವಿಲ್ಲದೆ ಸುಲಭವಾಗಿ ತಮ್ಮ ತಮ್ಮ ಕಾರ್ಯ ಚಟುವಟಿಕೆಗಳಲ್ಲಿ ಭಾಗವಹಿಸಬಹುದು. ಒಂದು ಬಟ್ಟಲು ಮಖಾನ ಬೀಜಗಳನ್ನು ಸೇವಿಸಿದರೂ ಸಹ ನಿಮ್ಮ ಕ್ಯಾಲರಿಗಳಲ್ಲಿ ಯಾವುದೇ ವ್ಯತ್ಯಾಸವಾಗುವುದಿಲ್ಲ. ಅಂದರೆ ಮಖಾನ ಬೀಜಗಳು ಕಡಿಮೆ ಕ್ಯಾಲೋರಿ ಅಂಶಗಳನ್ನು ಹೊಂದಿರುತ್ತವೆ

#ಮಖಾನ ಬೀಜಗಳಲ್ಲಿ ಆಂಟಿ – ಏಜಿಂಗ್ ಗುಣ ಲಕ್ಷಣಗಳಿಂದ ಯಥೇಚ್ಛವಾದ ಆಂಟಿ – ಆಕ್ಸಿಡೆಂಟ್ ಗಳನ್ನು ಒಳಗೊಂಡಿವೆ. ಪ್ರತಿ ದಿನ ಒಂದು ಹಿಡಿ ಮಖಾನ ಬೀಜಗಳನ್ನು ಸೇವಿಸುವುದರಿಂದ ನಿಮ್ಮ ಸೌಂದರ್ಯ ಹಾಗೂ ಯೌವ್ವನ ಹಾಗೇ ಉಳಿದು ನಿಮ್ಮ ದೇಹದ ಚರ್ಮದ ಹೊಳಪು ಹೆಚ್ಚುತ್ತದೆ. ಆದರೆ ಯಾವುದೇ ಕಾರಣಕ್ಕೂ ಮಖಾನ ಬೀಜಗಳನ್ನು ಎಣ್ಣೆಯಲ್ಲಿ ಕರಿದು ತಿನ್ನಬಾರದು.

Share this Article
Subscribe
Notify of
guest
0 Comments
Inline Feedbacks
View all comments
error:

Join Our

Group