ನೆನೆಸಿಟ್ಟ ಬಾದಾಮಿ ಸೇವನೆಯ ಆರೋಗ್ಯಕರ ಪ್ರಯೋಜನಗಳು!

ಪ್ರಮುಖವಾಗಿ ಸದಾಕಾಲ ಸಿಗುವ ಡ್ರೈ ಫ್ರೂಟ್ಸ್ ನಿಂದ(Dry Fruits)ಅಧಿಕ ಪ್ರಮಾಣದ ಆ್ಯಂಟಿ ಒಕ್ಸಿಡೆಂಟ್ ಗಳು ಸಿಗುವ ಕಾರಣಕ್ಕೆ ಆರೋಗ್ಯ ವೃದ್ಧಿಗೆ ಡ್ರೈಫ್ರೂಟ್ಸ್ ಮೊರೆ ಹೋಗುತ್ತಿದ್ದಾರೆ. ಹೀಗಾಗಿ ಡ್ರೈಫ್ರೂಟ್ಸ್ ನಲ್ಲಿ ಪ್ರಮುಖವಾಗಿರುವ ಬಾದಾಮಿ ಕೂಡ ಚಳಿಗಾಲದಲ್ಲಿ ನಮ್ಮ ಆರೋಗ್ಯವನ್ನು ವೃದ್ಧಿಸಲು ಹೇಗೆ ಸಹಕಾರಿಯಾಗಿದೆ ಎಂಬ ಮಾಹಿತಿ ಇಲ್ಲಿದೆ..
#ಸಕ್ಕರೆ ಮಟ್ಟ ನಿಯಂತ್ರಣ:ಬಾದಾಮಿಯಲ್ಲಿ ಕಾರ್ಬೋಹೈಡ್ರೇಟುಗಳು ಅತಿ ಕಡಿಮೆ ಇರುವುದರಿಂದ ಅವು ಮಧುಮೇಹಿಗಳಿಗೆ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ನೆರವಾಗುತ್ತವೆ. ಇದರ ಜೊತೆಗೇ ರಕ್ತದಲ್ಲಿ ಇನ್ಸುಲಿನ್ ನ ಕಾರ್ಯವು ಸುಧಾರಿಸುತ್ತದೆ.
#ಬಾದಾಮಿಯನ್ನು ಒಣದಾಗಿದ್ದಾಗ ಸೇವಿಸುವುದಕ್ಕಿಂತ ನೆನೆಸಿಟ್ಟು ಸೇವಿಸಿದಾಗ ಜೀರ್ಣಿಸಿಕೊಳ್ಳುವುದು ಸುಲಭ. ನೆನೆಸಿಟ್ಟ ಬಾದಾಮಿ ಜೀರ್ಣಕ್ರಿಯೆಯನ್ನು ಉತ್ತೇಜಿಸುತ್ತದೆ. ಅಲ್ಲದೇ ಈಗ ಪೋಷಕಾಂಶಗಳನ್ನು ಹೀರಿಕೊಳ್ಳಲು ಹೆಚ್ಚಿನ ಸಹಾಯ ಸಿಗುತ್ತದೆ. ಈ ಪೋಷಕಾಂಶಗಳು ಜೀರ್ಣಕ್ರಿಯೆಯನ್ನು ಉತ್ತೇಜಿಸುವ ಕಿಣ್ವಗಳ ಉತ್ಪಾದನೆಗೆ ಪ್ರಚೋದನೆ ನೀಡುತ್ತವೆ. ಪರಿಣಾಮವಾಗಿ ಜೀರ್ಣಕ್ರಿಯೆ ಸುಲಭ ಮತ್ತು ಪರಿಪೂರ್ಣವಾಗುತ್ತದೆ.
#ಹೆಚ್ಚು ಪೌಷ್ಟಿಕಾಂಶ: ನೀರಿನಲ್ಲಿ ನೆನೆಸಿದ ಬಾದಾಮಿಯನ್ನು ಸೇವಿಸುವುದರಿಂದ ಆ್ಯಂಟಿಆ್ಯಕ್ಸಿಡೆಂಟ್ಗಳು ಮತ್ತು ಫೈಬರ್ ಅಂಶವನ್ನು ಪಡೆಯಬಹುದು. ನೀರಿನಲ್ಲಿ ನೆನೆಸುವ ಪ್ರಕ್ರಿಯೆಯಿಂದ ಕಲ್ಮಶಗಳನ್ನು ತೆಗೆದುಹಾಕಲು ಸಹಾಯಕವಾಗಿದೆ.
#ಹೃದ್ರೋಗಗಳಿಗೆ ಪ್ರಯೋಜನಕಾರಿ ಬಾದಾಮಿ: ನೆನೆಸಿದ ಬಾದಾಮಿ ಹೃದ್ರೋಗಗಳಿಗೆ(Heart Problem) ತುಂಬಾ ಪ್ರಯೋಜನಕಾರಿಯಾಗಿದೆ. ಇದು ದೇಹದ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದಲ್ಲದೆ, ನೆನೆಸಿದ ಬಾದಾಮಿ ಮಧುಮೇಹ ರೋಗಿಗಳಿಗೆ ಸಹ ಪ್ರಯೋಜನಕಾರಿಯಾಗಿದೆ.
#ಬಾದಾಮಿಗಳಲ್ಲಿ ವಿಟಮಿನ್ ಇ ಸಮೃದ್ದ ಪ್ರಮಾಣದಲ್ಲಿದೆ. ಈ ವಿಟಮಿನ್ ಇ ನಮ್ಮ ಚರ್ಮ ಮತ್ತು ಕೂದಲಿನ ಪೋಷಣೆಗೆ ಅಗತ್ಯವಾಗಿ ಬೇಕಾಗಿರುವ ಪೋಷಕಾಂಶವಾಗಿದೆ. ಬಾದಾಮಿಯಲ್ಲಿರುವ ವಿಟಮಿನ್ ಇ ನಿಮ್ಮ ಚರ್ಮವನ್ನು ನಯವಾಗಿ ಮತ್ತು ಸೊಂಪಾಗಿಸಲು ನೆರವಾಗುತ್ತದೆ. ಚರ್ಮಕ್ಕೆ ಬಾದಾಮಿ ಎಣ್ಣೆಯನ್ನು ಬಳಸುವುದರಿಂದಲೂ ಹೆಚ್ಚಿನ ಪ್ರಯೋಜನ ಪಡೆಯಬಹುದು. ಕೂದಲಿನ ಸಮಸ್ಯೆಗಳ ವಿರುದ್ಧ ಹೋರಾಡಲು ಸಹಾ ಬಾದಾಮಿ ನೆರವಾಗುತ್ತದೆ