ಮೂಲಂಗಿ ಸೇವನೆಯ ಆರೋಗ್ಯಕರ ಪ್ರಯೋಜನಗಳು!

ಮೂಲಂಗಿಯನ್ನು ಹೆಚ್ಚಿನವರು ಸೇವಿಸಲು ಇಷ್ಟಪಡುವುದಿಲ್ಲ ಆದರೆ ಮೂಲಂಗಿ ಅನೇಕ ಆರೋಗ್ಯಕರ ಪ್ರಯೋಜನಗಳನ್ನು ಹೊಂದಿದೆ. ಇದರಲ್ಲಿರುವ ಜೀವಸತ್ವಗಳು, ಖನಿಜಾಂಶಗಳು, ಪೋಷಕಾಂಶಗಳು ದೇಹದ ಮೇಲೆ ಧನಾತ್ಮಕ ಪರಿಣಾಮವನ್ನು ಉಂಟುಮಾಡುತ್ತದೆ.ಇದು ಆಕಾರ, ಬಣ್ಣ ಮತ್ತು ರುಚಿಯಲ್ಲಿ ಭಿನ್ನವಾಗಿ ಹಲವಾರು ವಿಧಗಳಲ್ಲಿ ಬರುತ್ತದೆ. ಇದರಲ್ಲಿ ನಾರಿನಂಶ ಮತ್ತು ವಿಟಮಿನ್ ಹಾಗೂ ಆ್ಯಂಟಿ ಆಕ್ಸಿಡೆಂಟ್ ಅಧಿಕವಿದ್ದು ಮಲಬದ್ಧತೆ ಮತ್ತು ಮೂಲವ್ಯಾಧಿಯಂತಹ ಕಾಯಿಲೆಗಳನ್ನು ಗುಣಪಡಿಸಲು ಸಹಕಾರಿಯಾಗಿದೆ. ಇದರ ಇನ್ನಿತರ ಪ್ರಯೋಜನ ತಿಳಿಯೋಣ ಬನ್ನಿ!
#ಮನೆಯಲ್ಲಿ ಮಧುಮೇಹಿಗಳಿದ್ದರೆ ಮೂಲಂಗಿಯ ಬಿಳಿ ಭಾಗವನ್ನು ಸೇವಿಸುವುದು ತುಂಬಾ ಒಳ್ಳೆಯದು. ಮೂಲಂಗಿಯನ್ನು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆಯ ಪ್ರಮಾಣವು (Sugar level) ಕಡಿಮೆಯಾಗುತ್ತದೆ. ಆದರೆ ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಿರುವವರು ಮೂಲಂಗಿಯನ್ನು ಸೇವಿಸಬಾರದು. ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಿದ್ದರೆ ಮೂಲಂಗಿ ತಿನ್ನುವುದಕ್ಕೂ ಮುನ್ನ ವೈದ್ಯರನ್ನೊಮ್ಮೆ ಸಂಪರ್ಕಿಸಿ.
# ರಕ್ತದೊತ್ತಡ ನಿಯಂತ್ರಣ:ರಕ್ತದ ಒತ್ತಡವನ್ನು ನಿಯಂತ್ರಿಸುವಲ್ಲಿ ಮೂಲಂಗಿ ತುಂಬಾ ಸಹಕಾರಿ ಎಂಬುದು ಹಲವು ಅಧ್ಯಯನಗಳಲ್ಲಿ ಬಹಿರಂಗವಾಗಿದೆ. ಮೂಲಂಗಿಯಲ್ಲಿ ಪ್ರಬಲ ಆಂಟಿಆಕ್ಸಿಡೆಂಟ್‌ಗಳು ಮತ್ತು ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಮ್‌ನಂತಹ ಖನಿಜಗಳು ಸಮೃದ್ಧವಾಗಿವೆ. ಈ ಪೋಷಕಾಂಶಗಳು ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡಲು ಅಥವಾ ಕಡಿಮೆ ರಕ್ತದೊತ್ತಡವನ್ನು ಸರಿಪಡಿಸಲು ಸಹಾಯ ಮಾಡುತ್ತವೆ.
#ಆರೋಗ್ಯಕಾರಿ ಹೃದಯ:ಚಳಿಗಾಲದಲ್ಲಿ ಮೂಲಂಗಿಯನ್ನು ಸೇವಿಸುವುದು ಹೃದಯದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಉತ್ಕರ್ಷಣ ನಿರೋಧಕ ಗುಣಗಳಿಂದ ಸಮೃದ್ಧವಾಗಿರುವ ಮೂಲಂಗಿಯು ಹೃದಯವನ್ನು ಆರೋಗ್ಯವಾಗಿಡಲು ಜೊತೆಗೆ ಹೃದ್ರೋಗ ಎದುರಾಗುವ ಅಪಾಯದ ಸಾಧ್ಯತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
#ಮೂಲಂಗಿಯು ಕಾಮಾಲೆ ರೋಗದ ನಿಯಂತ್ರಣದಲ್ಲಿ ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ. ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕಲು ಸಹಾಯ ಮಾಡಿ, ಯಕೃತ್ತಿನ ಕಾರ್ಯ ಕ್ಷಮತೆಯನ್ನು ಹೆಚ್ಚಿಸುತ್ತದೆ
#ಮೂಲಂಗಿ ಸೊಪ್ಪನ್ನು ಸೇವಿಸುವುದರಿಂದ ಮತ್ತು ಸೊಪ್ಪಿನಿಂದ ಜ್ಯೂಸ್ ಮಾಡಿ ಕುಡಿಯುವುದರಿಂದ ಮೂತ್ರ ಕಟ್ಟಿಕೊಳ್ಳುವ ಸಮಸ್ಯೆಯು ದೂರವಾಗುತ್ತದೆ.