ಕಿಡ್ನಿ ಸ್ಟೋನ್ ಸಮಸ್ಯೆಗೆ ನೈಸರ್ಗಿಕ ಪರಿಹಾರ!

ಕಿಡ್ನಿ ಸ್ಟೋನ್ ಸಮಸ್ಯೆ ಇರುವ ವ್ಯಕ್ತಿಯು ಆಪರೇಷನ್ ಇಲ್ಲದೆಯೂ ಈ ಸಮಸ್ಯೆಯಿಂದ ಪರಿಹಾರ ಪಡೆಯಬಹುದು. ಕೆಲವು ಮನೆಮದ್ದುಗಳು ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಪರಿಹಾರ ನೀಡುತ್ತವೆ. ಈ ಲೇಖನದಲ್ಲಿ ಅಂತಹ ಕೆಲವು ಸಲಹೆಗಳನ್ನು ನೀಡಲಿದ್ದೇವೆ.

#ಆಪಲ್ ಸೀಡರ್ ವಿನೆಗರ್: ಒಂದು ಅಥವಾ ಎರಡು ಟೇಬಲ್ ಚಮಚಗಳಷ್ಟು ಆಪಲ್ ಸೈಡರ್ ವಿನೆಗರ್ ಗೆ ಒ೦ದಿಷ್ಟು ನೀರನ್ನು ಬೆರೆಸಿಕೊಳ್ಳುವುದರ ಮೂಲಕ ಅದನ್ನು ತಿಳಿಯಾಗಿಸಿಕೊ೦ಡು ಅದನ್ನು ದಿನಾಲೂ ಕುಡಿಯಿರಿ. ಆಪಲ್ ಸೈಡರ್ ವಿನಿಗರ್ ಮೂತ್ರಪಿ೦ಡಗಳಲ್ಲಿನ ಹರಳುಗಳನ್ನು ಕರಗಿಸಲು ನೆರವಾಗುವುದರ ಮೂಲಕ ಯಾವುದೇ ಯಾತನೆಯಿಲ್ಲದೇ ಕರಗಿದ ಹರಳುಗಳನ್ನು ಮೂತ್ರದೊಡನೆ ಶರೀರದಿ೦ದ ಹೊರಹಾಕಲು ನೆರವಾಗುತ್ತದೆ.

#ತುಳಸಿ ಎಲೆಗಳು:ತುಳಸಿ ಎಲೆಗಳು (ತುಳಸಿ) ಸಾಮಾನ್ಯವಾಗಿ ಮೂತ್ರಪಿಂಡದ ಒಟ್ಟಾರೆ ಆರೋಗ್ಯಕ್ಕೆ ಒಳ್ಳೆಯದು. ತುಳಸಿ ಎಲೆಗಳ ರಸವನ್ನು 1 ಚಮಚ ಜೇನುತುಪ್ಪದೊಂದಿಗೆ ಬೆರೆಸಿ ಪ್ರತಿದಿನ ಬೆಳಿಗ್ಗೆ ಕುಡಿಯಿರಿ. ಎರಡರಿಂದ ಮೂರು ತುಳಸಿ ಎಲೆಗಳನ್ನು ಜಗಿಯುವುದರಿಂದ ಕಿಡ್ನಿ ಸ್ಟೋನ್ ನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

#ಟೊಮ್ಯಾಟೋ ರಸ:ಪ್ರತಿದಿನ ಬೆಳಿಗ್ಗೆ ಒಂದು ಲೋಟ ಟೊಮೆಟೊ ರಸವನ್ನು ಒಂದು ಚಿಟಿಕೆ ಉಪ್ಪು ಮತ್ತು ಮೆಣಸು ಸೇರಿಸಿ ಕುಡಿಯಿರಿ. ಇದು ಮೂತ್ರಪಿಂಡದಲ್ಲಿರುವ ಖನಿಜ ಲವಣಗಳನ್ನು ಕರಗಿಸಲು ಸಹಾಯ ಮಾಡುತ್ತದೆ ಮತ್ತು ಲವಣಗಳು ಮತ್ತಷ್ಟು ಕಲ್ಲುಗಳನ್ನು ರೂಪಿಸುವುದನ್ನು ತಡೆಯುತ್ತದೆ.

#ನಿಂಬೆ ರಸ:ನಿಂಬೆ ರಸವು ಸಿಟ್ರಿಕ್ ಆಮ್ಲದಲ್ಲಿ ಸಮೃದ್ಧವಾಗಿದೆ, ಇದು ಕ್ಯಾಲ್ಸಿಯಂ ಆಧಾರಿತ ಮೂತ್ರಪಿಂಡದ ಕಲ್ಲುಗಳನ್ನು ಒಡೆಯಲು ಸಹಾಯ ಮಾಡುತ್ತದೆ. ಪ್ರತಿದಿನ ಎರಡರಿಂದ ಮೂರು ಲೋಟ ನಿಂಬೆ ರಸವನ್ನು ಕುಡಿಯುವುದರಿಂದ ಮೂತ್ರ ವಿಸರ್ಜನೆಯ ಪ್ರಮಾಣ ಹೆಚ್ಚಾಗುತ್ತದೆ ಮತ್ತು ಮೂತ್ರದ ಮೂಲಕ ಕಲ್ಲುಗಳನ್ನು ನೈಸರ್ಗಿಕವಾಗಿ ತೆಗೆದುಹಾಕುತ್ತದೆ.

#ಮೀನು:ಮೀನಿನಲ್ಲಿ ಒಳ್ಳೆಯ ಗುಣಮಟ್ಟದ ಪ್ರೊಟೀನ್ ಮತ್ತು ಒಮೇಗಾ-3 ಅಂಶಗಳು ಅಧಿಕ ಪ್ರಮಾಣದಲ್ಲಿ ಇವೆ. ಮೀನು ಮತ್ತು ಹುರಿದ ಮೀನಿನ ಆಹಾರಗಳನ್ನು ವಾರದಲ್ಲಿ ಎರಡು ಬಾರಿಯಾದರೂ ಸೇವಿಸುವುದರಿಂದ ದೇಹಕ್ಕೆ ಅವಶ್ಯವಿರುವ ಒಮೇಗಾ-3 ಲಭಿಸಿ ಕಿಡ್ನಿಯ ತೊಂದರೆಗಳು ದೂರವಾಗುತ್ತವೆ.

#ನೀರಿನ ಸೇವನೆ:ದೇಹದಲ್ಲಿ ನೀರಿನ ಅಂಶ ಕಡಿಮೆಯಾದಾಗ ದೇಹದಲ್ಲಿ ಲವಣಾಂಶಗಳ ಶೇಖರಣೆ ಹೆಚ್ಚಾಗುತ್ತದೆ. ಹೀಗಾಗಿ ಕಿಡ್ನಿ ಸ್ಟೋನ್ ಸಮಸ್ಯೆ ಕಂಡುಬರುತ್ತದೆ. ಈ ಸಮಸ್ಯೆಯಿಂದ ಪರಿಹಾರವನ್ನು ಕಂಡುಕೊಳ್ಳಲು ದಿನನಿತ್ಯ ಕನಿಷ್ಠ ಎರಡು ಲೀಟರ್ ನೀರನ್ನು ಸೇವನೆ ಮಾಡಬೇಕು. ಹೀಗೆ ಮಾಡುವುದರಿಂದ ದೇಹದಲ್ಲಿನ ಲವಣಾಂಶಗಳು ಮೂತ್ರದ ರೂಪದಲ್ಲಿ ದೇಹದಿಂದ ಹೊರಹೋಗಿ ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಸುಲಭವಾಗಿ ಪಾರಾಗಬಹುದಾಗಿದೆ .

Share this Article
Subscribe
Notify of
guest
0 Comments
Inline Feedbacks
View all comments
error:

Join Our

Group