ದ್ವಿಚಕ್ರ ವಾಹನಕ್ಕಾಗಿ ಅರ್ಜಿ ಆಹ್ವಾನ:ಅರ್ಜಿ ಸಲ್ಲಿಸಲು ಡಿಸೆಂಬರ್ 25 ಕೊನೆಯ ದಿನಾಂಕ!

: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ೨೦೨೨-೨೩ನೇ ಸಾಲಿನಲ್ಲಿ ಕುಟುಂಬದ ವಾರ್ಷಿಕ ವರಮಾನ ರೂ. ೨.೦೦ ಲಕ್ಷಗಳಿಗಿಂತ ಕಡಿಮೆ ಇರುವ ೨೦ ರಿಂದ ೬೦ ವರ್ಷದ ವಯೋಮಾನದ ತೀವ್ರತರವಾದ ದೈಹಿಕ ವಿಕಲಚೇತನರಿಗೆ ಅನುಕೂಲವಾಗುವಂತೆ ವಿಕಲಚೇತನರು ಸ್ವಂತ, ಖಾಸಗಿ ಉದ್ಯೋಗ ಮಾಡುತ್ತಿರುವ ಸ್ಥಳಕ್ಕೆ, ಕಾಲೇಜುಗಳಿಗೆ ಹೋಗಿ ಬರಲು ಜೀವಿತ ಕಾಲದಲ್ಲಿ ಒಬ್ಬ ಫಲಾನುಭವಿಗೆ ಒಂದು ಬಾರಿ ಯಂತ್ರಚಾಲಿತ ದ್ವಿಚಕ್ರ ವಾಹನ ವನ್ನು ನೀಡಲಾಗುವುದು.

ಧಾರವಾಡ ಜಿಲ್ಲಾ ವ್ಯಾಪ್ತಿಯಲ್ಲಿ ವಾಸ ಮಾಡುತ್ತಿರುವ ಅರ್ಹ ದೈಹಿಕ ವಿಕಲಚೇತನ ಅಭ್ಯರ್ಥಿಗಳಿಂದ ಮಾತ್ರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಡಿಸೆಂಬರ್ ೨೫, ೨೦೨೨ ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಹಾರ್ಡಕಾಫಿ (ಆಪ್‌ಲೈನ್) ಯನ್ನು ಆಯಾ ತಾಲೂಕಿನ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರು (ಎಂ. ಆರ್.ಡಬ್ಲ್ಯೂ), ತಾಲೂಕಾ ಪಂಚಾಯತ ಇವರಲ್ಲಿ ಸಲ್ಲಿಸಿ ದಾಖಲಾತಿಗಳು ಸರಿ ಇರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು.

ಅರ್ಜಿ ಫಾರಂ ಮತ್ತು ಹೆಚ್ಚಿನ ಮಾಹಿತಿಗಾಗಿ ತಾಲೂಕಾ ಪಂಚಾಯತಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this Article
Subscribe
Notify of
guest
0 Comments
Inline Feedbacks
View all comments
error:

Join Our

Group