ಲವಂಗದ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನ!

ಲವಂಗದ ಸೇವನೆಯಿಂದ ಜೀರ್ಣರಸಗಳು ಹೆಚ್ಚು ಸ್ರವಿಸಲು ಪ್ರಚೋದನೆ ಪಡೆಯುತ್ತದೆ. ತನ್ಮೂಲಕ ಜೀರ್ಣಕ್ರಿಯೆ ಉತ್ತಮಗೊಳ್ಳುತದೆ. ಇದರೊಂದಿಗೆ ಲವಂಗ ವಾಯು ಪ್ರಕೋಪವನ್ನು ಶಮನಗೊಳಿಸುತ್ತದೆ ಹಾಗೂ ಹೊಟ್ಟೆಯ ಉರಿ, ವಾಕರಿಕೆ ಹುಳಿತೇಗು ಮೊದಲಾದವುಗಳಿಂದ ರಕ್ಷಿಸುತ್ತದೆ. ಲವಂಗವು ದೇಹದಲ್ಲಿನ ಕೊಲೆಸ್ಟ್ರಾಲ್ ಮತ್ತು ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.
#ರಾತ್ರಿ ಮಲಗುವ ಮುನ್ನ ಲವಂಗವನ್ನು ತಿನ್ನುವುದು ಮತ್ತು ಬೆಚ್ಚಗಿನ ನೀರು ಕುಡಿಯುವುದು ಮಲಬದ್ಧತೆ(Constipation), ಹೊಟ್ಟೆ ನೋವು, ಗ್ಯಾಸ್ಟ್ರಿಕ್ ಮತ್ತು ಅಜೀರ್ಣ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ.
#ಬಹುಶಃ ನಿಮಗೆ ತಿಳಿದಿರಲಿಕ್ಕಿಲ್ಲ. ಲವಂಗದಲ್ಲಿ ವಿಟಮಿನ್ ಸಿ ಅಂಶಗಳಿದೆ. ಇದು ರಕ್ತದಲ್ಲಿ ಬಿಳಿ ರಕ್ತಕಣಗಳನ್ನು ಹೆಚ್ಚಿಸುತ್ತದೆ. ಇದರಿಂದ ದೇಹದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಖಾಯಿಲೆಗಳ ವಿರುದ್ಧ ಹೋರಾಡಲು ಸಹಕಾರಿಯಾಗುತ್ತದೆ.
#ಲವಂಗದ ಎಲೆಯ ಪುಡಿಯನ್ನು ನೋವಿರುವ ಹಲ್ಲಿನ ಮೇಲೆ ಇಟ್ಟರೆ ನೋವು ಕಡಿಮೆಯಾಗುತ್ತದೆ.
#ಯಕೃತ್ತಿನ ಆರೋಗ್ಯವನ್ನು ಹೆಚ್ಚಿಸುತ್ತದೆ:ಒಣಗಿದ ಲವಂಗ ಮೊಗ್ಗುಗಳು ಯಕೃತ್ತಿನ ಮೇಲೆ ರಕ್ಷಣಾತ್ಮಕ ಪರಿಣಾಮ ಬೀರುತ್ತವೆ ಎಂದು ಹೇಳಲಾಗುತ್ತದೆ. ಇದು ಹೊಸ ಕೋಶಗಳ ಬೆಳವಣಿಗೆ, ಯಕೃತ್ತಿನ ನಿರ್ವಿಶೀಕರಣವನ್ನು ಉತ್ತೇಜಿಸುವ ಮೂಲಕ ಯಕೃತ್ತಿನ ಆರೋಗ್ಯವನ್ನು ಹೆಚ್ಚಿಸುತ್ತದೆ ಎಂದು ಪೌಷ್ಟಿಕತಜ್ಞ ಅರೂಶಿ ಗಾರ್ಗ್ ಹೇಳುತ್ತಾರೆ.
#ಲವಂಗವನ್ನು ನಿಯಮಿತವಾಗಿ ಸೇವಿಸುವುದರಿಂದ ಲೈಂಗಿಕ ಸಮಸ್ಯೆಗಳಿಂದ ಮುಕ್ತಿ ದೊರೆಯುತ್ತದೆ ಎನ್ನುತ್ತಾರೆ ವೈದ್ಯ ಅಬ್ರಾರ್ ಮುಲ್ತಾನಿ. ಲವಂಗವನ್ನು ಸೇವಿಸುವುದರಿಂದ ವೀರ್ಯದ ಸಂಖ್ಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಆದಾಗ್ಯೂ, ನೀವು ಅದನ್ನು ಅತಿಯಾಗಿ ಸೇವಿಸುವುದನ್ನು ತಪ್ಪಿಸಬೇಕು, ಏಕೆಂದರೆ ಇದನ್ನು ಅತಿಯಾಗಿ ಸೇವಿಸುವುದರಿಂದ ಪುರುಷ ಹಾರ್ಮೋನ್ ಟೆಸ್ಟೋಸ್ಟೆರಾನ್ ಅನ್ನು ತೊಂದರೆಗೊಳಿಸಬಹುದು,