ಉಚಿತ ದ್ವಿಚಕ್ರ ವಾಹನಕ್ಕಾಗಿ ಕೂಡಲೇ ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸಲು ಮಾರ್ಚ್ 4 ಕೊನೆಯ ದಿನಾಂಕ

ಆತ್ಮೀಯರೇ,ಕರ್ನಾಟಕ ರಾಜ್ಯ ಸಫಾಯಿ ಕರ್ಮಾಚಾರಿ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಯ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ವಿದ್ಯುತ್‌ ಚಾಲಿತ, ಇತರೆ ದ್ವಿಚಕ್ರ ವಾಹನಗಳ ಸೌಲಭ್ಯಕ್ಕಾಗಿ ಸಫಾಯಿ ಕರ್ಮಾಚಾರಿ, ಪೌರ ಕಾರ್ಮಿಕ, ಮ್ಯಾನುವೆಲ್ ಸ್ಕ್ಯಾವೆಂಜರ್ ವೃತ್ತಿಯನ್ನು ನಿರ್ವಹಿಸುತ್ತಿರುವ ಅಥವಾ ಅವರ ಅವಲಂಬಿತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅರ್ಹತೆ?

-ಈಗಾಗಲೇ ನಿಗಮದಿಂದ ಯಾವುದೇ ಸಾಲ ಸೌಲಭ್ಯ ಪಡೆದಿರಬಾರದು

– 21 ರಿಂದ 50 ವರ್ಷ ವಯಸ್ಸಿನೊಳಗಿನ ಫಲಾಪೇಕ್ಷಿಗಳು ಅರ್ಜಿಗಳನ್ನು ಸಲ್ಲಿಸಬಹುದು.

-ವಾಹನ ಸೌಲಭ್ಯವನ್ನು ಪಡೆಯಲು ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು.

#ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿಯನ್ನು ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದ ಹತ್ತಿರವಿರುವ (ವಾರ್ಡ್ 9, ಮುಬಾರಕ್ ರಸ್ತೆ) ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಮಾರ್ಚ್ 4ರ ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು.

#ಹೆಚ್ಚಿನ ಮಾಹಿತಿಗಾಗಿ

ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು, ಚಾಮರಾಜನಗರ ಅಥವಾ ದೂ.ಸಂ 08226-224133 ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪರು ತಿಳಿಸಿದ್ದಾರೆ

Share this Article
Subscribe
Notify of
guest
0 Comments
Inline Feedbacks
View all comments
error:

Join Our

Group