ಚುನಾವಣೆಯ ಸುಧಾರಣೆಯ ಬಗ್ಗೆಗೆ ಮತದಾರರಲ್ಲಿ ಅರಿವು ಮೂಡಿಸಬೇಕು!

ವಿಶ್ವದಲ್ಲೇ ದೊಡ್ಡ ಪ್ರಜಾಪ್ರಭುತ್ವ ಹೊಂದಿರುವ ದೇಶ ಭಾರತ. ದೇಶದಲ್ಲಿ ಕೂಡ ಪ್ರಜಾಪ್ರಭುತ್ವ ಯಶಸ್ವಿಯಾಗಿದೆ. ಚುನಾವಣಾ ಪ್ರಕ್ರಿಯೆಯಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು. ಅದಕ್ಕಾಗಿ ಚುನಾವಣಾ ಆಯೋಗ ಹಲವು ಸುಧಾರಣೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಅಲ್ಲದೆ ಸರಳೀಕರಣ ತಂದು ಪಾರದರ್ಶಕವಾಗಿ ಅನುಷ್ಠಾನಗೊಳಿಸುತ್ತಿದೆ.

ಸತತ ಸುಧಾರಣೆಯಾಗಬೇಕು. ಆಯೋಗ ತಂದಿರುವ ಸುಧಾರಣೆಗಳು ಸಾರ್ವಜನಿಕರಿಗೆ ತಲುಪಬೇಕು. ಆಧಾರ್ ಜೋಡಣೆ ಮಾಡಿದರೆ ಮತದಾನ ದುರ್ಬಳಕೆ ಮಾಡಿಕೊಳ್ಳಲು ಅವಕಾಶ ಇರುವುದಿಲ್ಲ. ಪ್ರಜಾಪ್ರಭುತ್ವವನ್ನು ರಕ್ಷಿಸಬೇಕಾಗಿರುವುದು ಪ್ರತಿಯೊಬ್ಬರ ಜವಾಬ್ದಾರಿ ಆಗಿದೆ.

ಮುಂಬರುವ ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡು ಚುನಾವಣಾ ಸುಧಾರಣೆಗಳನ್ನು ಜಾರಿಗೆ ತಂದಿದ್ದು ಅವುಗಳ ಅನುಷ್ಠಾನದಲ್ಲಿ ರಾಜ್ಯಕ್ಕೆ ಒಳ್ಳೆಯ ಹೆಸರು ತರಬೇಕು. ಹೀಗಾಗಿ ಚುನಾವಣಾ ಕಾರ್ಯದಲ್ಲಿ ನಿರತರಾದವರು ಮನೆ ಮನೆಗೆ ತರಳಿ ಅರಿವು ಮೂಡಿಸಬೇಕು.

ಪ್ರಜಾಪ್ರಭುತ್ವವು ಆಡಳಿತದಲ್ಲಿ ಸಾರ್ವಜನಿಕರು ನೇರವಾಗಿ ಅಥವಾ ಪರೋಕ್ಷವಾಗಿ ಭಾಗವಹಿಸುವ ಆಡಳಿತ ವ್ಯವಸ್ಥೆಯಾಗಿದೆ. ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ನಮ್ಮ ಸಂವಿಧಾನವು ಮತದಾರರಿಗೆ ಮಹತ್ತರವಾದ ಜವಾಬ್ದಾರಿಯನ್ನು ನೀಡಿದೆ. ಎಂಬುವುದನ್ನು ಚುನಾವಣಾ ಕಾರ್ಯದಲ್ಲಿ ನಿರತರಾದವರು ಈ ಬಗ್ಗೆ ಇನ್ನಷ್ಟು ಜಾಗೃತಿ ಮೂಡಿಸುವ ಕಾರ್ಯವನ್ನ ಮಾಡಬೇಕು.

Share this Article
Subscribe
Notify of
guest
0 Comments
Inline Feedbacks
View all comments
error:

Join Our

Group