ಮಜ್ಜಿಗೆ ಸೇವನೆಯ ಆರೋಗ್ಯಕರ ಪ್ರಯೋಜನಗಳು!

ಮಜ್ಜಿಗೆಯಲ್ಲಿ ವಿವಿಧ ಪದಾರ್ಥಗಳನ್ನು ಹಾಕಿ ಕುಡಿಯುವುದರಿಂದ ವಿವಿಧ ಪ್ರಯೋಜನಗಳಿವೆ. ಪ್ರತಿಯೊಬ್ಬರೂ ತಮ್ಮ ಮನೆಯಲ್ಲಿ ಮಜ್ಜಿಗೆಯನ್ನು ತಯಾರಿಸುತ್ತಾರೆ, ಏಕೆಂದರೆ ಇದನ್ನು ಮನೆಯಲ್ಲಿ ಬಹಳ ಸುಲಭವಾಗಿ ತಯಾರಿಸಲಾಗುತ್ತದೆ. ಮಜ್ಜಿಗೆ ಮಾಡಲು, ಮೊಸರನ್ನು ಒಂದು ಪಾತ್ರೆಯಲ್ಲಿ ತೆಗೆದುಕೊಂಡು ನಂತರ ಅದಕ್ಕೆ ಸುಮಾರು 4 ಬಾರಿ ನೀರು ಸೇರಿಸಿ ಚೆನ್ನಾಗಿ ಕಲಕುತ್ತಿದ್ದರೆ ಈ ರೀತಿಯಾಗಿ ನಿಮ್ಮ ಮಜ್ಜಿಗೆ ಸಿದ್ಧವಾಗುತ್ತದೆ. ಆಯುರ್ವೇದದಲ್ಲಿ ಮಜ್ಜಿಗೆಯ ಪ್ರಯೋಜನಗಳನ್ನು ಸಹ ಉಲ್ಲೇಖಿಸಲಾಗಿದೆ. ಹೀಗೆ ಇದು ನಮ್ಮ ದೇಹಕ್ಕೆ ಹೇಗೆ ಪ್ರಯೋಜನಕಾರಿಯಾಗಿದೆ ಎಂಬುದನ್ನು ತಿಳಿದುಕೊಳ್ಳೋಣ.
ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ:ಮಜ್ಜಿಗೆಯಲ್ಲಿ ಮೊಸರು ಮುಖ್ಯವಾಗಿರುವ ಕಾರಣ ಮೊಸರಿನ ಗುಣಗಳೆಲ್ಲವೂ ಇದೆ. ಇದರಲ್ಲಿರುವ ಪ್ರೋಬಯೋಟಿಕ್ಸ್ ಅಥವಾ ಜೀರ್ಣಕ್ರಿಯೆಗೆ ಸಹಕರಿಸುವ ಪೋಷಕಾಂಶಗಳು ಜೀರ್ಣಾಂಗಗಳ ಹೊರೆಯನ್ನು ಕಡಿಮೆ ಮಾಡುತ್ತವೆ. ಅಲ್ಲದೇ ಮಜ್ಜಿಗೆಯಲ್ಲಿ ಸೇರಿಸಿರುವ ಜೀರಿಗೆ ಪುಡಿ ಮೊದಲಾದ ಮಸಾಲೆ ಪದಾರ್ಥಗಳು ಜೀರ್ಣಕ್ರಿಯೆಗೆ ಇನ್ನಷ್ಟು ಸಹಕರಿಸಿ ಜೀರ್ಣಕ್ರಿಯೆಯನ್ನು ಸುಲಭ ಮತ್ತು ಪರಿಪೂರ್ಣಗೊಳಿಸುತ್ತವೆ. ಅಲ್ಲದೇ ಬೆಳ್ಳುಳ್ಳಿ ಮೊದಲಾದವು ಕರುಳಿನ ತೊಂದರೆಗಳನ್ನು ನಿವಾರಿಸುತ್ತದೆ. ಒಟ್ಟಾರೆ ಜೀರ್ಣವ್ಯವಸ್ಥೆಯನ್ನು ಸುಲಭಗೊಳಿಸುತ್ತದೆ.
#ಮಜ್ಜಿಗೆ ಬೇಸಿಗೆಯಲ್ಲಿ ನೀರಿನ ಕೊರತೆಯನ್ನು ಹೋಗಲಾಡಿಸುತ್ತದೆ, ಏಕೆಂದರೆ ಮಜ್ಜಿಗೆಯಲ್ಲಿ ಶೇಕಡಾ 90 ರಷ್ಟು ನೀರು ಕಂಡುಬರುತ್ತದೆ.
#ಹೊಟ್ಟೆ ಉಬ್ಬರ ಕಡಿಮೆ ಮಾಡಲು: ಆಹಾರದಲ್ಲಿ ಹೆಚ್ಚಿನ ಪ್ರಮಾಣದ ಮಸಾಲೆ ಹೊಟ್ಟೆ ಸೇರುವುದರಿಂದ ಇವು ಹೊಟ್ಟೆಯಲ್ಲಿ ಉರಿ, ಆಮ್ಲೀಯತೆ ಮೊದಲಾದ ತೊಂದರೆಗಳನ್ನು ಉಂಟುಮಾಡಬಹುದು. ಆದರೆ ಹಾಲಿನಲ್ಲಿರುವ ಪ್ರೋಟೀನುಗಳು ಮಜ್ಜಿಗೆಯಲ್ಲಿಯೂ ಇದ್ದು ಈ ಉರಿ ತರಿಸುವ ಮಸಾಲೆಗಳನ್ನು ತಟಸ್ಥವಾಗಿಸುತ್ತವೆ. ಆದ್ದರಿಂದ ಊಟದ ಕಡೆಯ ಆಹಾರವಾಗಿ ಮಜ್ಜಿಗೆಯನ್ನು ಸೇವಿಸುವ ಮೂಲಕ ಮಸಾಲೆಗಳ ಕಾರಣ ಎದುರಾಗಬಹುದಾಗಿದ್ದ ಉರಿ, ಆಮ್ಲೀಯತೆ, ಹೊಟ್ಟೆ ಉಬ್ಬರಿಕೆ ಮೊದಲಾದವು ಕಡಿಮೆಯಾಗುತ್ತದೆ.
#ತೂಕ ಇಳಿಸಲು ಸಹಕಾರಿ:ಮಜ್ಜಿಗೆಯಲ್ಲಿ ಕೊಬ್ಬಿನಾಂಶವು ತುಂಬಾ ಕಡಿಮೆ ಇರುವ ಕಾರಣದಿಂದ ಮಜ್ಜಿಗೆಯು ತೂಕ ಇಳಿಸಿ ಕೊಳ್ಳಲು ತುಂಬಾ ಸಹಕಾರಿ. ಮಜ್ಜಿಗೆಯಲ್ಲಿ ಉನ್ನತ ಮಟ್ಟದ ವಿಟಮಿನ್ ಗಳು, ಖನಿಜಾಂಶಗಳು, ಪೋಷಕಾಂಶಗಳಾದ ಪ್ರೋಟೀನ್, ಕ್ಯಾಲ್ಸಿಯಂ, ಪೊಟಾಶೀಯಂ, ಮೆಗ್ನಿಶಿಯಂ ಮತ್ತು ಇತರ ಕಿಣ್ವಗಳು ಇವೆ. ಇದು ದೇಹದಲ್ಲಿ ಶಕ್ತಿಯ ಮಟ್ಟವನ್ನು ಕಾಪಾಡಲು ನೆರವಾಗುವುದು.ಇದು ಹಸಿವನ್ನು ಹೆಚ್ಚಿಸಿದರೂ ನೀವು ಅನಾರೋಗ್ಯಕಾರಿ ಹಾಗೂ ಜಂಕ್ ಫುಡ್ ತಿನ್ನುವುದನ್ನು ಇದು ಕಡಿಮೆ ಮಾಡುವುದು.
#ಕ್ಯಾನ್ಸರ್, ಕೊಲೆಸ್ಟ್ರಾಲ್, ರಕ್ತದೊತ್ತಡಕ್ಕೆಲ್ಲಾ ರಾಮಬಾಣ:ಕ್ಯಾನ್ಸರ್ ತಡೆಯಲು, ಕೊಲೆಸ್ಟ್ರಾಲ್ ಕಡಿಮೆಗೊಳಿಸಲು ಮತ್ತು ರಕ್ತದೊತ್ತಡ ನಿಯಂತ್ರಿಸಲು ನೆರವಾಗುತ್ತದೆ. ಹೌದು, ನಿತ್ಯವೂ ಮಜ್ಜಿಗೆಯನ್ನು ಸೇವಿಸುವ ಮೂಲಕ ದೇಹಕ್ಕೆ ಹಲವು ರೀತಿಯ ಲಾಭಗಳಿವೆ. ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆಗೊಳಿಸುವುದು, ರಕ್ತದೊತ್ತಡ ಸಮರ್ಪಕವಾಗಿರುವಂತೆ ನೋಡಿಕೊಳ್ಳುವುದು ಮೊದಲಾದವು ನೇರವಾದ ಲಾಭಗಳಾಗಿವೆ.