ನೆನಪಿನ ಶಕ್ತಿಯ ಸಾಮರ್ಥ್ಯವನ್ನು ವೃದ್ಧಿಸಲು ಇವು ನೆರವಾಗುವುದು!

ಹೇಗೆ ನಮ್ಮ ಆಹಾರಗಳು ನಮಗೆ ಒಳ್ಳೆಯ ಪ್ರಯೋಜನಗಳನ್ನು ನೀಡುತ್ತದೆಯೋ, ಹಾಗೆಯೇ ಕೆಲ ಆಹಾರಗಳು ನೆನಪಿನ ಶಕ್ತಿಯನ್ನು ಕುಂಠಿತಗೊಳಿಸುತ್ತದೆ. ನಾವು ಸೇವಿಸುವ ಆಹಾರ ನಮ್ಮ ನೆನಪಿನ ಶಕ್ತಿಯನ್ನು ವೃದ್ಧಿಸಲು ಖಂಡಿತವಾಗಲೂ ಸಹಕಾರ ನೀಡುತ್ತದೆ. ಅಂತಹ ಆಹಾರಗಳ ಪಟ್ಟಿ ಇಲ್ಲಿವೆ ನೋಡಿ!
#ಪಿಸ್ತಾವು ಹೃದಯಕ್ಕೆ ತುಂಬಾ ಒಳ್ಳೆಯದು. ಪಿಸ್ತಾದಲ್ಲಿ ಆ್ಯಂಟಿಆಕ್ಸಿಡೆಂಟ್, ಫೈಟೊಸ್ಟೆರಾಲ್ಗಳು ಮತ್ತು ಅಪರ್ಯಾಪ್ತ ಕೊಬ್ಬಿನಾಮ್ಲಗಳು (ಪಾಲಿಅನ್ಸಾಚುರೇಟೆಡ್ ಮತ್ತು ಮಾನ್ಆನ್ಸುಟ್ಯೂರೇಶನ್ ಕೊಬ್ಬಿನ ಆಮ್ಲಗಳು) ಸೇರಿವೆ. ಇದು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಿ ಹೃದಯವನ್ನು ಆರೋಗ್ಯಕರವಾಗಿಡುತ್ತದೆ.
#ಪಿಸ್ತಾದಲ್ಲಿ ಉನ್ನತ ಮಟ್ಟ ಆ್ಯಂಟಿಆಕ್ಸಿಡೆಂಟ್ ಗುಣಗಳು ಇವೆ. ಇದರಲ್ಲಿ ಇರುವಂತಹ ಆ್ಯಂಟಿಆಕ್ಸಿಡೆಂಟ್ ಗ್ಲೈಕೇಶನ್ ಕ್ರಿಯೆಯನ್ನು ತಗ್ಗಿಸಿ ಮಧುಮೇಹವನ್ನು ನಿಯಂತ್ರಿಸಲು ನೆರವಾಗುವುದು.
#ಈ ಬೀಜಗಳಲ್ಲಿ ಟ್ರಿಪ್ಟೊಫಾನ್ ಎನ್ನುವ ಅಮಿನೋ ಆ್ಯಸಿಡ್ ಸಮೃದ್ಧವಾಗಿದೆ. ಇದು ನರಪೇಕ್ಷಕವು ಸರಿಯಾದ ರೀತಿಯಲ್ಲಿ ಕೆಲಸ ಮಾಡಿ ಸಾಮಾಜಿಕ ಆತಂಕ ಕಡಿಮೆ ಮಾಡಲು ಅಗತ್ಯವಿದೆ.
#ಪುದೀನಾ ತಾಜಾ ಪುದೀನಾದ ಸುವಾಸನೆಯು ಪ್ರಚೋದಕದಂತೆ ಕೆಲಸ ಮಾಡಿ ಜಾಗೃತಾವಸ್ಥೆ ಮತ್ತು ಮೆದುಳಿನ ಕ್ರಿಯೆಯನ್ನು ಉತ್ತಮ ಪಡಿಸುತ್ತದೆ. ಮೆದುಳಿನ ಶಕ್ತಿಯನ್ನು ಹೆಚ್ಚಿಸಲು ದಿನದಲ್ಲಿ ಒಂದು ಕಪ್ ಪುದೀನಾ ಚಹಾ ಕುಡಿಯಿರಿ.
#ಬಸಲೆ ಹಾಗೂ ಪಾಲಕ್ ಏಕಾಗ್ರತೆಯನ್ನು ಹೆಚ್ಚಿಸುವುದರೊಂದಿಗೆ ಜ್ಞಾಪಕ ಶಕ್ತಿಯನ್ನು ಸುಧಾರಣೆ ಮಾಡುತ್ತದೆ. ಒಮೆಗಾ-3 ಕೊಬ್ಬಿನ ಆಮ್ಲವನ್ನು ಒಳಗೊಂಡಿರುವ ಬಸಲೆಯು ಮೆದುಳಿನ ಕಾರ್ಯಚಟುವಟಿಕೆಯನ್ನು ಉತ್ತಮಪಡಿಸುವಂತಹ ಹಲವಾರು ರೀತಿಯ ಪೋಷಕಾಂಶಗಳನ್ನು ಒಳಗೊಂಡಿದೆ.
#ಬಾದಾಮಿಯಲ್ಲಿರುವಂತಹ ಪ್ರೋಟೀನ್‌ಗಳು ಮೆದುಳಿಗೆ ತುಂಬಾ ಒಳ್ಳೆಯದೆಂದು ಸಾಬೀತಾಗಿದೆ. ಇದು ಮೆದುಳಿಗೆ ಶಕ್ತಿಯನ್ನು ಒದಗಿಸುವುದು ಮಾತ್ರವಲ್ಲದೆ ಮೆದುಳಿಗೆ ಆಗಿರುವಂತಹ ಸಣ್ಣಪುಟ್ಟ ತೊಂದರೆಗಳನ್ನು ಇದು ನಿವಾರಿಸುತ್ತದೆ. ಇದು ಮೆದುಳಿನ ಜ್ಞಾನದ ಕ್ರಿಯೆಯನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರ ನಿರ್ಹಹಿಸುತ್ತದೆ. ನೆನಪಿನ ಶಕ್ತಿಯ ಸಾಮರ್ಥ್ಯವನ್ನು ವೃದ್ಧಿಸಲು ಇದು ನೆರವಾಗುವುದು,